ಹೊಸನಗರ ಕೋವಿಡ್ ಕೇರ್ ಸೆಂಟರ್ ಗೆ ಜಿಲ್ಲಾಧಿಕಾರಿ ಭೇಟಿ ಹಾಗೂ ಪರಿಶೀಲನೆ...
ಹೊಸನಗರ :ಇಂದು ಹೊಸನಗರ ತಾಲೂಕಿನಲ್ಲಿ ಹೊಸದಾಗಿ ನಿರ್ಮಾಣವಾದ ಕೋವಿಡ್ ಕೇರ್ ಸೆಂಟರ್ ಭೇಟಿ ಮಾಡಿ ಪರಿಶೀಲನೆ ನೆಡಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್.
ಹೊಸನಗರದ ಸಾರ್ವಜನಿಕ ಆಸ್ಪತ್ರೆ, ಕೆಇಬಿ ಆಫೀಸ್ ಎದುರಿಗೆ ಇರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೇಲ್ ಅನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಾಡು ಮಾಡಲಾಗಿದ್ದು, ಸೂಕ್ತ ಸೌಲಭ್ಯದೊಂದಿಗೆ ನಾಳೆಯಿಂದ ಆರಂಭವಾಗಲಿದೆ ಎಂದರು.
ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನ ಎರಡನೇ ಅಲೆಯನ್ನ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತರಾಗಬೇಕು ಹಾಗೂ ಜನರು ಸಹ ಸರ್ಕಾರದ ಲಾಕ್ ಡೌನ್ ಆದೇಶವನ್ನ ಕಟ್ಟುನಿಟ್ಟಿನಿಂದ ಪಾಲನೆ ಮಾಡಬೇಕು ಹಾಗೂ ಹಳ್ಳಿಗಳಲ್ಲಿ ಕೊರೊನ ಸೋಂಕು ವ್ಯಾಪಿಸಿದ್ದು ಜಿಲ್ಲಾಡಳಿತ ಈಗಾಗಲೇ ಹಳ್ಳಿಗಳಲ್ಲಿ ವೈರಸ್ ಹರಡದ ರೀತಿಯಲ್ಲಿ ಜಾಗೃತಿ ಮೂಡಿಸುತಿದ್ದು, ಗ್ರಾಮದ ಪಂಚಾಯತ್ ಮಟ್ಟದಲ್ಲಿ ಸ್ಥಳೀಯ ಆಡಳಿತವರ್ಗ ಸೂಕ್ತ ಮುಂಜಾಗ್ರತಾ ಕ್ರಮವನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೀವ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್, ತಾಲೂಕು ವೈದ್ಯಾಧಿಕಾರಿ ಸುರೇಶ್, ಪಿಎಸ್ಐ ರಾಜೇಂದ್ರ ನಾಯಕ್ ಮತ್ತಿತರ ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.