ಸಾಗರ : ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾರಿ ಬೆಂಬಲಿಗರೊಂದಿಗೆ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ!

ಸಾಗರ :ಸಾಗರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ನಾಮಪತ್ರ ಸಲ್ಲಿಸಲಿದ್ದು ಸಾಗರದ ಗಣಪತಿ ದೇವಸ್ಥಾನದಲ್ಕಿ ದಂಪತಿ ಸಮೇತ ಪೂಜೆ ಸಲ್ಲಿಸಿ ಕಾಂಗ್ರೆಸ್ ಕಚೇರಿಯಿಂದ  ಉಪವಿಭಾಗಾಧಿಕಾರಿ ಕಚೇರಿಗೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು.

ತದನಂತರ ಮಾಧ್ಯಮಗಳಿಗೆ ಮಾತನಾಡಿದ,ಗೋಪಾಲಕೃಷ್ಣ ಬೇಳೂರು, ಇವತ್ತು ಒಳ್ಳೆಯ ದಿನ ಎಂದುನಾಮಪತ್ರ ಸಲ್ಲಿಸಿದ್ದೆನೆ.ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ, ಸರಳವಾಗಿ ನಾಮಪತ್ರ ಸಲ್ಲಿಸುವ ಉದ್ದೇಶದಿಂದ ಯಾವ ಕಾರ್ಯಕರ್ತರಿಗೂ ಕರೆ ಕೊಟ್ಟಿಲ್ಲ. ಅದರೂ, ಸ್ವಯಂಪ್ರೇರಿತವಾಗಿ ಸಾವಿರಾರು ಕಾರ್ಯಕರ್ತರು ಬಂದಿದ್ದಾರೆ ಎಂದರು. ಪ್ರತಿಯೊಬ್ಬ ಕಾರ್ಯಕರ್ತರಿಗೂ ಹೃದಯ ಪೂರ್ವಕ ಧನ್ಯವಾದಗಳು ಎಂದರು.ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ,ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತೆ ಆಗಿದೆ. ಮಾಜಿ ಸಿಎಂ, ಬಿಜೆಪಿ ಕಟ್ಟಾಳು ಕಾಂಗ್ರೆಸ್ ಪಕ್ಷಕ್ಕೆ ಬಂದಿರುವುದು ನಿಜಕ್ಕೂ ಖುಷಿಯ ವಿಚಾರ‌ವೆಂದರು..

ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ರಾಜ್ಯದಲ್ಲಿ ಮೂಲೆಗುಂಪು ಮಾಡಿ ಕಣ್ಣೀರು ಹಾಕಿಸಿ, ಅಧಿಕಾರದಿಂದ ಕೆಳಗೆ ಇಳಿಸಿದ್ರು.ಪಕ್ಷಕ್ಕಾಗಿ ದುಡಿದ ನಾಯಕರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆ ಇಲ್ಲದಂತೆ ಮಾಡಿದ್ದಾರೆ. ಮೋದಿ ಬಿಟ್ಟರೇ, ಬೇರೆ ಯಾರಿಗೂ ಬೆಲೆ ಇಲ್ಲ ಎಂಬಂತೆ ಆಗಿದೆ. ಲಕ್ಷಣ್ ಸವದಿ ಡಿಸಿಎಂ ಆಗಿದ್ದವರು. ಅವರಿಗೂ ಸಹ ಟಿಕೆಟ್ ನೀಡಲಿಲ್ಲ ಎಂದರು.ಹೋಗಿ ಹೋಗಿ ರಮೇಶ್ ಜಾರಕಿಹೊಳಿ ಅಂತವರಿಗೆ ಟಿಕೆಟ್ ಕೋಡ್ತಾರೆ. ಇದನ್ನ ಗಮನಿಸಿದ್ರೇ, ಪಕ್ಷ ದುರಂತದ ಹಾದಿ ಹಿಡಿದಿರೋದು ಗೊತ್ತಾಗುತ್ತೇ.ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಸಾಮಾನ್ಯ.ಇಲ್ಲಿಂದನೂ ಹೋಗ್ತಾರೆ. ಅಲ್ಲಿಂದಾನೂ ಬರ್ತಾರೆ.ರಾಜಕೀಯ ತಂತ್ರ ನೆಡೆಯುತ್ತಾ ಇರುತ್ತದೆ,ಇದಕ್ಕೆಲ್ಲ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದರು.

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್, ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡಿದ್ರು.ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆ.ಮನೆ ಹಾಳು ಮಾಡೋ ರಾಜ್ಯದಲ್ಲಿ ಇರೋದು ಹಾಲಪ್ಪನಿಗೆ ಮಾತ್ರ.ಹಾಲಪ್ಪನ ಬಗ್ಗೆ ನಾನು ಟೀಕೆ ಮಾಡೋದೇ ಬೇಡ.ಅವರ ಭ್ರಷ್ಟಾಚಾರ, ಪಕ್ಷ ಒಡೆದಿದ್ದನ್ನ ಅವರ ಪಕ್ಷದವರೇ ಹೇಳ್ತಿದ್ದಾರೆ.

ವಿರೋದ ಪಕ್ಷವಾಗಿ ನಾವು ಕೂಡ ನಮ್ಮ ಕೆಲಸ ಮಾಡಿದ್ದೇವೆ. ಈಗಾಗಲೇ ಹೊಸನಗರ- ಸಾಗರದಲ್ಲಿ ಒಂದು ಸುತ್ತಿನ ಪ್ರಚಾರ ಮುಗಿಸಿದ್ದೇನೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಬಾರಿ ಬೆಂಬಲಿಗರು, ಕಾರ್ಯಕರ್ತರು, ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದು ಭರ್ಜರಿ ಓಪನಿಂಗ್ ಪಡೆದಿದ್ದಾರೆ..

Post a Comment

Previous Post Next Post